ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ , ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಿ: ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ 1 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ , ಸಾಂಸ್ಕøತಿ ಕಾರ್ಯಕ್ರಮಗಳಲ್ಲಿ ಪಾಲ್ಗುಳ್ಳುವಂತೆ ಸೂಚಿಸಿ, ವಿದ್ಯಾರ್ಥಿಗಳು ಆಟಗಳಲ್ಲಿ ಪಾಲ್ಗುಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ನೀಡಿದರು.
ಪಟ್ಟಣದ ಹೊರವಲಯದ ಮ್ಯಾಂಗೋವ್ಯಾಲಿ ಶಾಲಾವರಣದಲ್ಲಿ ಗುರುವಾರ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಕರೆನೀಡಿದರು.
ಗಂಗೋತ್ರಿ ಕಾಲೇಜಿನ ಆಡಳಿತ ಮಂಡಲಿ ಅಧ್ಯಕ್ಷ ಎಸ್.ಜಿ.ಮುರಳಿನಾಥ್ ಕ್ರೀಡೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಕ್ರೀಡಾಕೂಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು, ಗೆಲವು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧಾತ್ಮಕ ಮನೋಭಾವದಿಂದ ಆರೋಗ್ಯಕ್ಕಾಗಿ ಆಟವಾಡಿ ಕ್ರೀಡೆಗಳಲ್ಲಿ ವಿಜೇತರಾಗಿ ಶಾಲೆಗಳ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.
ಬಿಇಒ ವಿ.ಉಮಾದೇವಿ ಮಾತನಾಡಿ ವಿದ್ಯಾರ್ಥಿಗಳು ವ್ಯಾಸಂಗದ ದಿನಗಳಲ್ಲಿ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡಾಶಕ್ತಿಯನ್ನು ಬೆಳಿಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾಮನೋಭಾವದಿಂದ ಸೋಲು , ಗೆಲವು ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸುವಂತೆ ತಿಳಿಸಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಎನ್.ಬಿ.ಗೋಪಾಲಗೌಡ, ಜಿ.ಪಂ.ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಮ್ಯಾಂಗೋವ್ಯಾಲಿ ಶಾಲಾ ಆಡಳಿತ ಮಂಡಲಿ ಅಧ್ಯಕ್ಷ ಎಸ್.ಜಿ.ಅಮರನಾಥ್, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲ್, ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸುಬ್ರಮಣಿ, ಸಿಆರ್‍ಪಿ ರಾಧಕೃಷ್ಣ, ಗ್ರಾ.ಪಂ ಉಪಾಧ್ಯಕ್ಷ ವಿಶ್ವನಾಥರೆಡ್ಡಿ, ಗ್ರಾ.ಪಂ ಮಾಜಿ ಅಧ್ಯಕ್ಷ ಹೊಸಹಳ್ಳಿ ಬಾಬು, ಮುಖಂಡ ಅಂಬೇಡ್ಕರ್ ಪಾಳ್ಯ ರವಿ, ಸರ್ಕಾರಿ ಬಾಲಕೀಯರ ಕಾಲೇಜಿನ ಉಪಪ್ರಾಂಶುಪಾಲ ಶ್ರೀಧರ್, ಶಿಕ್ಷಕರಾದ ಎನ್.ವಿ.ವೇಣುಗೋಪಾಲ್ , ಬಾಬು ಇದ್ದರು.