ಶ್ರೀನಿವಾಸಪುರ : ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಅಧ್ಯಯನ ನಡೆಸಿ ಅರಿವು ಮೂಡಿಸಿಕೊಂಡು ಸಾರ್ವಜನಿಕರಿಗೂ ಸಹ ಕಾನೂನಿನ ಬಗ್ಗೆ ತಿಳಿ ಹೇಳಬೇಕು. ಗ್ರಾಮೀಣ ಭಾಗದಲ್ಲಿ ಅಕ್ಷರಸ್ಥರು ಕಡಿಮೆ ಇರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಕಾಯ್ದೆಯ ಬಗ್ಗೆ ಅರಿತು ಸುತ್ತಲಿನ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.
ಪಟ್ಟಣ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ತಾಲೂಕು ಕಾನೂನು ಸೇವ ಸಮತಿವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೆಣ್ಣು ಮಕ್ಕಳು ಲೈಗಿಂಕ ದೌರ್ಜನ್ಯಕ್ಕೆ ಒಳಗಾದರೆ ತಂದೆ , ತಾಯಿ, ಪೋಷಕರಿಗೆ ಅಥವಾ ಶಿಕ್ಷಕರಿಗೆ ತಿಳಿಸಬೇಕು. ಬಾಲ್ಯ ವಿವಾಹದ ಬಗ್ಗೆ ಮಕ್ಕಳಿಗೆ ತಿಳಿದು ಬಂದರೆ ಅದನ್ನು ತಿಳಿಸುವ ಕೆಲಸ ಆಗಬೇಕು. ಬೇರೆಯವರಿಂದ ತೊಂದರೆಯಾದರೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಯಾವುದೇ ಕಾಣರಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮಕ್ಕಳಿಗೆ ಸಲಹೆ ನೀಡಿದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ತಾಲೂಕುವಾರು ಕಾನೂನು ಸೇವಾ ಸಮಿತಿಯನ್ನು ರಚಿಸಿ ಜನರಿಗೆ ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ನ್ಯಾಯಾಂಗವು ಅತ್ಯಂತ ಶ್ರೇಷ್ಠವಾದುದಾಗಿದೆ. ಇದು ಮನುಷ್ಯರ ಜೀವನದಲ್ಲಿ ರಕ್ಷಾ ಕವಚದಂತೆ ಕೆಲಸ ಮಾಡುತ್ತದೆ ಎಂದು ಹೇಳಿದರು. ಬೇರೆಯವರಿಂದ ತೊಂದರೆಯಾದರೆ ಕಾನೂನಿನ ಸಹಾಯ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್, ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ , ಪಿಎಸ್ಐ ಜಯರಾಮ್, ಉಪಪ್ರಾಂಶುಪಾಲ ಶ್ರೀಧರ್, ಸಿಡಿಪಿಒ ನವೀನ್, ವಕೀಲ ಶ್ರೀನಿವಾಸಗೌಡ, ಪುರಸಭೆ ಆರೋಗ್ಯ ಅಧಿಕಾರಿ ಕೆ.ಜೆ.ರಮೇಶ್, ಕಂದಾಯ ನಿರೀಕ್ಷ ಎನ್.ಶಂಕರ್, ಇಸಿಒ ಸುಬ್ರಮಣಿ, ಪುರಸಭೆ ಸಿಬ್ಬಂದಿ ಪ್ರತಾಪ್, ವೆಂಕಟೇಶಯ್ಯ ಇದ್ದರು.