ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು. ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು.
ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ಅನುದಾನದಲ್ಲಿ ರೂ.3 ಲಕ್ಷ ಮೌಲ್ಯದ ವಿವಿಧ ಉಪಕರಣಗಳನ್ನು ನೀಡಿ ಮಾತನಾಡಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಲ ಅಭಿವೃದ್ಧಿಗಾಗಿ ಏಕಲವ್ಯ ಶಾಲೆ ತೆರೆಯಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಟಿವಿ, ಪ್ರೊಜೆಕ್ಟರ್ ಮತ್ತಿತರ ಸೌಲಭ್ಯ ನೀಡಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ರಾಮಲಿಂಗಾರೆಡ್ಡಿ, ಪಿಡಿಒ ಸವಿತ, ಬಿಇಒ ವಿ.ಉಮಾದೇವಿ, ಪ್ರಾಂಶುಪಾಲ ಪ್ರಹ್ಲಾದ್ರಾವ್, ಅಶ್ವತ್ಥನಾರಾಯಣ, ನಾಗರಾಜ್ ಇದ್ದರು.