ಜಿಲ್ಲೆಯ ಒಂದು ಪಿಹೆಚ್‍ಸಿ ದತ್ತು ಪಡೆಯಲು ರೋಟರಿಗೆ ಸಲಹೆ ಮಾದರಿ ಪ್ರಾಥಮಿಕ ಆರೋಗ್ಯಕೇಂದ್ರವಾಗಿಸಿ-ಡಿಸಿ ಡಾ.ಆರ್.ಸೆಲ್ವಮಣಿ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ:- ಜಿಲ್ಲೆಯ ಯಾವುದಾದರೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ಪಡೆದುಕೊಂಡು ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಸೋಮವಾರ ಕೋಲಾರ ರೋಟರಿ ಸಂಸ್ಥೆಯವತಿಯಿಂದ ನೀಡಲ್ಪಟ್ಟ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 12 ಆಮ್ಲಜನಕ ಸಾಂದ್ರಕಗಳು ಸೇರಿದಂತೆ ಇನ್ನಿತರ ವೈದ್ಯಕೀಯ ಸಲಕರಣೆಗಳನ್ನು ಸ್ಪೀಕರಿಸಿ ಅವರು ಮಾತನಾಡುತ್ತಿದ್ದರು.
ಕೊರೊನಾ ನಿಯಂತ್ರಣದಲ್ಲಿ ರೋಟರಿ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳು, ದಾನಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸುತ್ತಿರುವುದು ಉತ್ತಮ ಕಾರ್ಯವಾಗಿದೆಯೆಂದು ಶ್ಲಾಸಿದ ಜಿಲ್ಲಾಧಿಕಾರಿಗಳು, ಕೋಲಾರ ಜಿಲ್ಲೆಯಾದ್ಯಂತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದು ಕೋರಿದರು.
ಕೋಲಾರ ಜಿಲ್ಲೆಯಲ್ಲಿ 12.50 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈಗಾಗಲೇ ಸುಮಾರು 5.50 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಜಿಲ್ಲೆಯಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವಂತಾಗಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು.
ಅಂತರಾಷ್ಟ್ರೀಯ ರೋಟರಿ ಯೋಜನಾ ಸಂಯೋಜಕ ಟಿ.ಎಸ್.ರಾಮಚಂದ್ರಗೌಡ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ರೋಟರಿ ಸಂಸ್ಥೆಯು ಅನೇಕ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಕೋಲಾರ ಜಿಲ್ಲೆಯಾದ್ಯಂತ 200 ಕ್ಕೂ ಹೆಚ್ಚು ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್‍ಗಳನ್ನು ವಿತರಿಸುವ ಗುರಿ ಹೊಂದಲಾಗಿತ್ತು. ಆದರೆ, ಕೊರೊನಾ ಕಾರಣದಿಂದಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ, ಆದ್ದರಿಂದ ಈ ಯೋಜನೆಯನ್ನು ಮಾರ್ಪಡಿಸಿ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಲಾಗುತ್ತಿದೆಯೆಂದು ವಿವರಿಸಿದರು.
ರೋಟರಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 12 ಆಮ್ಲಜನಕ ಸಾಂದ್ರಕಗಳು, 500 ಪಿಪಿಇ ಕಿಟ್‍ಗಳು, 2 ಸಾವಿರ ಒಮ್ಮೆ ಬಳಕೆಯ ಬೆಡ್ ಶೀಟ್‍ಗಳು, 500 ಲೀಟರ್ ಸ್ಯಾನಿಟೈಜರ್‍ಗಳನ್ನು ವಿತರಿಸಲಾಗುತ್ತಿದೆಯೆಂದು ವಿವರಿಸಿದರು.
ಮುಂದಿನ ದಿನಗಳಲ್ಲಿ ಕೋಲಾರ ರೋಟರಿ ಸಂಸ್ಥೆಯಿಂದ ಕೊರೊನಾ -À್ರಂಟ್ ಲೈನ್ ವಾರಿಯರ್ಸ್‍ಗಳಿಗೆ ದಿನಸಿ ಕಿಟ್‍ಗಳು, ಅಗತ್ಯವಿರುವರಿಗೆ ಆರೋಗ್ಯ ಕಿಟ್‍ಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.
ಜಿಲ್ಲಾ ಆರೋಗ್ಯಾ„ಕಾರಿ ಡಾ.ಜಗದೀಶ್ ಮಾತನಾಡಿ, ರೋಟರಿ ಸಂಸ್ಥೆಯು ಜಿಲ್ಲೆಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳನ್ನು ವಿತರಿಸುತ್ತಿರುವುದು ಪ್ರಯೋಜನಕಾರಿಯಾಗಿದೆಯೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ನಿಯೋಜಿತ ಅಧ್ಯಕ್ಷ ರಾಮನಾಥ್, ರೋಟರಿ ಪದಾಧಿಕಾರಿಗಳಾದ ದೇವರಾಜ್, ವೆಂಕಟರವಣಪ್ಪ, ರಾಘವೇಂದ್ರ ಬಾಲಾಜಿ, ನಾಗಶೇಖರ್, ಶಿವಕುಮಾರ್, ಸಿ.ಆರ್.ಅಶೋಕ್, ಜನಾರ್ಧನ್, ಎನ್.ನಾಗರಾಜು, ರೋಟ್ರಾಕ್ಟ್ ರಾಹುಲ್ ಹಾಜರಿದ್ದರು.