ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ : ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು . ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಸೂಚಿಸಿದರು . ಇಂದು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿ , 3 ನೇ ಅಲೆಯಿಂದ ಸಂಕಷ್ಟಕ್ಕಿಡಾಗದೆ ಐಸಿಯು ಹಾಸಿಗೆಗಳು , ವೆಂಟಿಲೇಟರ್ , ಪೈಪ್ ಲೈನ್ ಆಕ್ಸಿಜನ್ ಮತ್ತಿತರ ಸೌಲಭ್ಯಗಳ ಬಗ್ಗೆ ಅವರು ಪರಿಶೀಲನೆ ಮಾಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆ ಹಾಗೂ ಕೋವಿಡ್ ವಾರ್ ರೂಂನಲ್ಲಿರುವ ಕೊರತೆ ಮತ್ತು ಆಸ್ಪತ್ರೆಗಳಲ್ಲಿರುವ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು . ಕೋವಿಡ್ ಸಂಭಾವ್ಯ 3 ನೇ ಅಲೆ ಬರುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು , ಮಕ್ಕಳ ಆರೋಗ್ಯವನ್ನು ಕಾಪಾಡುವ ಬಗ್ಗೆ ವಿಶೇಷ ಗಮನ ಹರಿಸಬೇಕು . ಮಕ್ಕಳಿಗೆ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆ ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಅವರು ತಿಳಿಸಿದರು . ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆಸ್ಪತ್ರೆಗಳಲ್ಲಿ 3 ನೇ ಅಲೆಯನ್ನು ನಿಯಂತ್ರಣ ಮಾಡಲು ಬೇಕಾದ ಎಲ್ಲಾ ಸಲಕರಣೆಗಳನ್ನು ಒದಗಿಸುವುದು . ಕೋವಿಡ್ 3 ನೇ ಅಲೆಯಲ್ಲಿ ತಜ್ಞರ ವರದಿ ಪ್ರಕಾರ ಮಕ್ಕಳ ಮೇಲೆ ಎಷ್ಟು ಪರಿಣಾಮ ಬೀರುತ್ತದೆ . ಆ ಮಕ್ಕಳ ಮೇಲೆ ಪರಿಣಾಮ ಬೀರದಿರುವುದಕ್ಕೆ ನೀವು ಏನು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರಾ . ಎಷ್ಟು ಮಕ್ಕಳಿಗೆ ಬೆಡ್‌ಗಳ ವ್ಯವಸ್ಥೆ ಇದೆ ಎಂದು ಆರೋಗ್ಯ ಅಧಿಕಾರಿಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು , ಆಸ್ಪತ್ರೆಯಲ್ಲಿ ಸಂಪೂರ್ಣವಾಗಿ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು . ನಾವು ಮಾಡುವ ಕೆಲಸ ಜನರ ಜೀವನವನ್ನು ಕೆಲಸವಾಗಬೇಕು ತಿಳಿಸಿದರು . ಆಸ್ಪತ್ರೆಯ ಸಿಬ್ಬಂದಿಗಳ ಮತ್ತು ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು . ಮಕ್ಕಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು . ಈಗ ಇರುವ 100 ಹಾಸಿಗಳ ಜೊತೆಗೆ 25 ಹಾಸಿಗೆಳ ಬೆಡ್‌ಗಳನ್ನು ಹೆಚ್ಚಿಸಲಾಗುವುದು . ಮಕ್ಕಳಿಗಾಗಿ 5 ವೆಂಟಿಲೇಟರ್ , ವಯಸ್ಕರ 5 ವೆಂಟಿಲೇಟರ್‌ಗಳ ಪೈಪ್ ಲೈನ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಕುಮಾರ್ , ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ ಶ್ರೀನಿವಾಸ್, ಬಿ ಜೆ ಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.