ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರ ಶಿಕ್ಷಕರ ಸಮಸ್ಯೆಗಳಿಗೆ ಸ್ಪಮದಿಸಿ ಕಾರ್ಯನಿರ್ವಹಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ವಿ.ರವಿಕುಮಾರ್ ಹೇಳಿದರು.
ತಾಲ್ಲೂಕಿನ ಮರಸನಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ನಿವಾರಣೆಗಾಗಿ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ಶಿಕ್ಷಕ ಮಿತ್ರರೊಬ್ಬರನ್ನು ನೇಮಿಸಲಾಗುವುದು ಎಂದು ಹೇಳಿದರು.
ಸಂಘದ ಜಿಲ್ಲಾ ಘಟಕದ ಕಜಾಂಚಿ ಆರ್.ಎಸ್.ರೆಡ್ಡಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಬಯ್ಯಾರೆಡ್ಡಿ, ಎಚ್.ವಿ.ಶೋಭಾ, ಪ್ರಧಾನ ಕಾರ್ಯದರ್ಶಿ ಸಿ.ವಿ.ಶಿವಣ್ಣ, ಖಜಾಂಚಿ ಎನ್.ವಿ.ವೇಣುಗೋಪಾಲ್, ಸಹ ಕಾರ್ಯದರ್ಶಿ ಎಲ್.ಶ್ರೀರಾಮ್, ಸಂಘಟನಾ ಕಾರ್ಯದರ್ಶಿ ಜಿ.ವಿ.ಚನ್ನಪ್ಪ, ಎನ್.ಮಾಧವಿ, ನಿರ್ದೇಶಕರಾದ ಟಿ.ಎಲ್.ದಿವಾಕರ್, ಕೆ.ವಿ.ನರಸಮ್ಮ, ಎಲ್.ಆನಂದ್, ಕೆ.ರಘುನಾಥರೆಡ್ಡಿ, ಡಿ.ವಿ.ವೆಂಕಟರಾಮರೆಡ್ಡಿ, ಎಸ್.ಮಂಜುನಾಥ್, ಟಿ.ಎಸ್.ಅನಿತ ಇದ್ದರು.