“ಎಂಜಿನಿಯರಿಂಗ್, ಮೆಡಿಕಲ್, ವಾಣಿಜ್ಯ ಯಾವುದೇ ಕ್ಷೇತ್ರವನ್ನು ವಿದ್ಯಾರ್ಥಿಗಳು ಆಯ್ದುಕೊಂಡರೂ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಶಿಕ್ಷಕ ವೃತ್ತಿಗೆ ಹೋಗಬೇಕಾದ ಸಂದರ್ಭ ಬರಬಹುದು. ಆದ್ದರಿಂದ ವಿದ್ಯಾರ್ಥಿಗಳು ಕಲಿಕೆಯ ಹಂತದಿಂದಲೇ ಮೌಲ್ಯಯುತ ನಡವಳಿಕೆಯನ್ನು ಹೊಂದಿರಬೇಕು ‘ ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳು ಆಯೋಜಿಸಿದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಕರೆ ನೀಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ವಿದ್ಯಾರ್ಥಿಗಳ ಪ್ರತಿಯೊಂದು ಚಟುವಟಿಕೆಯೂ, ಅವರ ಮುಂದಿನ ಜೀವನದಲ್ಲಿ ಯಶಸ್ಸಿನ ಒಂದು ಭಾಗವಾಗಿರುತ್ತದೆ ಎಂದು ತಿಳಿಸಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಿಗೆ ಹಲವು ಆಟಗಳನ್ನು ಆಯೋಜಿಸಲಾಯಿತು. ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭುವನ್ ಕಾರ್ಯಕ್ರಮ ನಿರ್ವಹಿಸಿದರು.