ಶ್ರೀನಿವಾಸಪುರ : ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಬಾವಿಸಿ, ಶಿಕ್ಷಕರು ಮನಸ್ಸು ಮಾಡಿದರೆ ದೇಶವನ್ನು ಕಟ್ಟಬಹುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.
ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸಂಜೆ ಎಸ್ಸಿ , ಎಸ್ಟಿ ಪ್ರಾಥಮಿಕ ಶಿಕ್ಷಕರ ಸಂಘದವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥ ಹಾಗೂ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷದ ಸಂಗತಿ. ನಮ್ಮ ದೇಶವು ಉಜ್ವಲವಾಗಿ ಅಭಿವೃದ್ಧಿಯಾಗಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯ ಮುಖ್ಯ. ಆದ್ದರಿಂದ ಸಂವಿಧಾನವನ್ನ ಪ್ರತಿಯೊಬ್ಬರು ಅರಿತು ಕೊಳ್ಳಬೇಕು . ನಾನು ಪ್ರಾರಂಭದ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದವನು. ಪ್ರಾಥಮಿಕ ಶಾಲೆಯ ಶಿಕ್ಷಣ ಪ್ರತಿಯೊಬ್ಬರಿಗೆ ಅಡಿಪಾಯ ಮಹತ್ವವಾಗಿದೆ. ಆದ್ದರಿಂದ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕಾಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.
ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಮಾತನಾಡಿ ಎಲ್ಲಾ ಗ್ರಾಮೀಣ ಭಾಗದ ಬಡಕುಟುಂಬದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದು, ನಗರ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದು, ಆದ್ದರಿಂದ ಶಿಕ್ಷಕರು ಗುಣಾತ್ಮಕ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಹೆಚ್ಚು ಒತ್ತುನೀಡುವಂತೆ ಸಲಹೆ ನೀಡಿದರು.
ಶಿಕ್ಷಕರಿಗೆ ಶಿಕ್ಷಕ ಸುಗಮವಾಗಿ ಕಾರ್ಯನಿರ್ವಹಿಸಿಲು ಯಾವುದೇ ಸಮಸ್ಯೆಗಳು ಇದ್ದಲ್ಲಿ ನಾನು ನಿಮ್ಮೊಂದಿಗೆ ಸಹಕಾರ ನೀಡಲು ಸದಾ ಸಿದ್ದನಿರುತ್ತೇನೆ ಎಂದು ಭರವಸೆ ನೀಡಿದರು. ನಾನು ಕೂಡ ಹಿಂದುಳಿದ ಸಮಾಜದಿಂದ ಬಂದವನು. ಸಮಾಜದಲ್ಲಿನ ಎಲ್ಲಾ ನೋವುಗಳನ್ನು ಅರಿತಿದ್ದೇನೆ .
ಎಸ್ಸಿ, ಎಸ್ಟಿ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಟಿ.ಸೊಣ್ಣಪ್ಪ ಮಾತನಾಡಿದರು. ಇದೇ ಸಮಯದಲ್ಲಿ ಎಸ್ಎಸ್ಎಲ್ಸಿ , ಪಿಯುಸಿ ವಿದ್ಯಾರ್ಥಿಗಳಿಗೆ ಹಾಗು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿರುವ ಮಹನೀಯರನ್ನು ಗುರ್ತಿಸಿ ಸನ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್, ಜಿಲ್ಲಾಧ್ಯಕ್ಷ ಎನ್.ಮುನಿಯಪ್ಪ, ಜಿಲ್ಲಾ ಖಾಜಾಂಚಿ, ನೀಲಟೂರು ಎ.ನಾಗರಾಜ್, ಬಿಆರ್ಸಿ ಕೆ.ಸಿ.ವಸಂತ, ತಾಲೂಕು ದೈಹಿಕ ಪರಿವೀಕ್ಷಕ ವೆಂಕಟಸ್ವಾಮಿ, ಮುಖಂಡ ಕೆ.ಕೆ.ಮಂಜುನಾಥ್, ಎಸ್ಸಿ, ಎಸ್ಟಿ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್ ಸಾಂಬಮೂರ್ತಿ, ಪ್ರಧಾನ ಕಾರ್ಯದರ್ಶಿ ಸಿ.ನಾಗೇಂದ್ರ, ಗೌರವಾಧ್ಯಕ್ಷ ವಿ.ಮುನಿಸ್ವಾಮಿ, ಕಾರ್ಯಾಧ್ಯಕ್ಷ ಎಂ.ಪಿ.ನಾರಾಯಣಸ್ವಾಮಿ, ಖಜಾಂಚಿ ಎಂ.ಪ್ರಸನ್ನಕುಮಾರ್ , ಸಂಘನಕಾರ್ಯದರ್ಶಿ ವಿ.ಚಂದ್ರಣ್ಣ, ಆದಿಲಕ್ಷ್ಯಮ್ಮ, ತಾಲೂಕು ನೌಕರರ ಸಂಘದ ಅಧ್ಯಕ್ಷ ಎಸ್.ವಿ.ಜನಾರ್ಧನ್, ಪ್ರಧಾನ ಕಾರ್ಯದರ್ಶಿ ಕೆ.ಶ್ರೀನಿವಾಸ್ , ಬಿಐಈಆರ್ಟಿ ಜಿ.ವಿ.ಚಂದ್ರಪ್ಪ, ಸಿಆರ್ಪಿಗಳಾದ ಕೆ.ವೇಣುಗೋಪಾಲ್, ಪೆದ್ದಪ್ಪಯ್ಯ, ಆಂಜನೇಯಪ್ಪ, ಆರ್.ನಾಗೇಶ್, ವೆಂಕಟೇಶ್, ಉಪನ್ಯಾಸಕ ಚಲಪತಿ ಇದ್ದರು.