JANANUDI.COM NETWORK
ಬೆಂಗಳೂರು, ಮೇ.04: ಕೊರೋನಾದಿಂದ ಜನ ವಿಲ ವಿಲವೆಂದು ಸಾಯುತ್ತಿರುವಾಗಲೂ, ಆಸ್ಪತ್ರೆಗಳಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾಗಳ ಕುಕ್ರತ್ಯವನ್ನು ಬಿಜೆಪಿಯರದೇ ಆದ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ. ಅವರು ಮೇ.04 ರಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರುಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಯಲಿಗೆಳೆದಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದನ್ನು ತೋರಿಸುತ್ತಿದೆ. ಆದರೆ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಯಲಿಗೆಳೆದಿದ್ದಾರೆ
ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ.
ಹಣಕ್ಕಾಗಿ ಬೆಡ್ ನ ಕೃತಕ ಅಭಾವ ಸೃಷ್ಟಿಸುವ ದುಷ್ಟ ಕ್ರತ್ಯ
”ಕೋವಿಡ್- ಯಾವುದೇ ಗುಣ ಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಸಿಬ್ಬಂದಿ ಬೆಡ್ ನೋಂದಣಿಗೊಳಿಸಿ, ನಂತರ ಅದೇ ಬೆಡ್ ನ್ನು ಹಣಕ್ಕಾಗಿ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿಗೊಳಿಸುತ್ತಾರೆ., ಕೆಲವೇ ಕೆಲವರು ಅಕ್ರಮವಾಗಿ ಬೆಡ್ ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ, ನೈಜ್ಯ ಕೊರೊನಾ ಉಲ್ಬಣಗೊಂಡ ರೋಗಿಗಳಿಗೆ ಬೆಡ್ ದೊರಕುತ್ತಿಲ್ಲ, ಎಷ್ಟೋ ಮಂದಿಗೆ ತಮ್ಮ ಹೆಸರಿನಲ್ಲಿ ಬೆಡ್ ಬುಕ್ ಆಗಿರುವುದೇ ತಿಳಿದಿಲ್ಲ” ಎಂದು ಸಂಸದ ತೇಜಸ್ವಿ ಸ್ಫೋಟಕ ಮಾಹಿತಿ ನಿಡೀದ್ದಾರೆ.
“ಈ ದಂಧೆಯಲ್ಲಿ ಕೆಲವು ಬಿಬಿಎಂಪಿ ಅಧಿಕಾರಿಗಳೆ ಇದರಲ್ಲಿ ಶಾಮೀಲಾಗಿದ್ದಾರೆ” ಎಂದು ಅಘಾತಕಾರಿ ವಿಷಯ ತಿಳಿಸಿ, ಬಿಬಿಎಂಪಿ ಅಧಿಕಾರಿಗಳ ವಿರುದ್ದ ತೇಜಸ್ವಿ ಸೂರ್ಯ ಗುಡುಗಿದ್ದಾರೆ
ಜನಪ್ರತಿನಿಧಿಗಳಿಗೆ ವಾರ್ ರೂಮ್ ಗಳಿಗೆ ಹೋಗಲು ಬಿಡುತ್ತಿರಲಿಲ್ಲ” ಶಾಸಕ ಸತೀಶ್ ರೆಡ್ಡಿ ಅವರು ಜನರನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರೂ ಸಹ ವಾರ್ ರೂಮ್ ಒಳಗೆ ಹೋಗಿ ತಪಾಸಣೆ ನಡೆಸುವುದಕ್ಕೆ ಬಿಡದಂತಹ ವಾತಾವರಣ ಇದೆ” ಎಂದು ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ. ಇದು ಕೇವಲ ಭ್ರಷ್ಟಾಚಾರವಲ್ಲ, ಕೊಲೆ ಕ್ರತ್ಯ, ಬೆಡ್ ಸಿಗದೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೇಳುತ್ತೇನೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಈ ವಿಷಯವನ್ನು ಬಿಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಇತರರು ಭಾಗಿಯಾಗಿದ್ದರು.