ಶ್ರೀನಿವಾಸಪುರ : 2024-25 ನೇ ಸಾಲಿನ ಬಜೆಟ್ ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣಕಾಸು ಹಂಚಿಕೆ ಮೀಸಲಿಟ್ಟು ಅಂಗನವಾಡಿಗಳನ್ನು ಬಲಪಡಿಸಿ ಮತ್ತು ಕಾರ್ಯಕರ್ತೆಯರು, ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲ್ಲೂಕು ದಂಡಾಧಿಕಾರಿಗಳಾದ ಜಿ.ಎನ್.ಸುದೀಂದ್ರರವರ ಮೂಲಕ ಕೇಂದ್ರದ ಹಣಕಾಸು ಮಂತ್ರಿಗಳಿಗೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಬುಧವಾರ ಈ ವರ್ಷದ ಕೇಂದ್ರ ಬಜೆಟ್ ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಸಾಕಷ್ಟು ಹಣಕಾಸು ಹಂಚಿಕೆ ಮೀಸಲಿಟ್ಟು ಅಂಗನವಾಡಿಗಳನ್ನು ಬಲಪಡಿಸಿ ಮತ್ತು ಕಾರ್ಯಕರ್ತೆಯರು, ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಾಕಷ್ಟು ಸಂಪನ್ಮೂಲಗಳೊಂದಿಗೆ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಸಮಯದ ಅಂಗನವಾಡಿಗಳಾಗಿ, ಪಾಲನಾ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಿ, ಗ್ರೇಡ್ -3 ಗ್ರೇಡ್ -4 ಸರ್ಕಾರಿ ನೌಕರರಂತೆ ಅಂಗನವಾಡಿ ಕಾರ್ಯಕರ್ತರನ್ನು ಮತ್ತು ಸಹಾಯಕರನ್ನು ಖಾಯಂ ಮಾಡಿ ಪಿಂಚಣಿ ರೂಗಳನ್ನು ಹೆಚ್ಚಿಸಲು ಹಾಗೂ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಕೇಂದ್ರದ ಹಣಕಾಸು ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ರವರಿಗೆ ಶ್ರೀನಿವಾಸಪುರ ತಾಲ್ಲೂಕು ದಂಡಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು.
ಈ ವೇಳೆ ಕಾರ್ಯದರ್ಶಿಯಾದ ಮಮತ, ಖಜಾಂಜಿಯಾದ ಪುಷ್ಪಲತಾ, ಉಪಾಧ್ಯಕ್ಷೆ ಸರೋಜಮ್ಮ, ಲಕ್ಷ್ಮೀದೇವಮ್ಮ, ಪದ್ಮಮ್ಮ, ಅಂಬಿಕಾ, ತನುಜ ಮತ್ತಿತರ ಸಂಘದ ಸದಸ್ಯರು ಇದ್ದರು.