ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

JANANUDI.COM NETWORK


ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಕರಾಳ ಘಟನೆ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂದಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಇನ್ನೊಂದು ಬದಿಗೆ ಹಾರಿ ಲಾರಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.