JANANUDI.COM NETWORK
ಪುತ್ತೂರು: ಶಾಲೆಯ ಬಿಸಿಯೂಟದ ಸಹಾಯಕಿ ಅಡುಗೆ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು.ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ,ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಬಿಸಿ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಜೂನ್ 12 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.