

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಸಂಸ್ಥಾಪಕರ ದಿನಾಚರಣೆ ಸಮಾರಂಭವು ಡಿಸೆಂಬರ್ 5ರಂದು ನಡೆಯಲಿದೆ. ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಟ್ರಸ್ಟ್ ಇದರ ಅಧ್ಯಕ್ಷರಾದ ಶಾಂತಾರಾಮ್ ಭಂಡಾರ್ಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಿಂಗಾಪುರದ ಜಾನಕಿ ಶ್ರೀಕಾಂತ್ ಅವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.