ಕೋಲಾರ : ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಇಡೀ ದೇಶದ ಗಮನ ಸೆಳೆಯುವಂತೆ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ
ಅಕ್ರಮ್ ಪಾಷ ಅವರನ್ನು ಕೋಲಾರದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲೂಕಿನಲ್ಲಿ ಪೊಲಿಟಿಕಲ್ ಸೈನ್ಸ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಬಳಿಕ ಕೆಎಸ್ ಅಧಿಕಾರಿಯಾಗಿ ಸೇವೆಯನ್ನು ಆರಂಭಿಸಿದ ಅಕ್ರಂ ಪಾಷಾ ಅವರು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರೋಬೇಷನರಿ ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕೊಡಗು ಜಿಲ್ಲೆಯ ಉಪವಿಭಾಗಧಿಕಾರಿ ಆಗಿ ಸೇವೆ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ದಿವಂಗತ ಪ್ರೋ. ಡಾ. ಮುಮ್ತಾಝ್ ಅಲೀ ಖಾನ್ ಅವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅಕ್ರಂಪಾಷ ಅವರು ತಮ್ಮ ಅವಧಿಯಲ್ಲಿ ವಿಭಿನ್ನ ಸೇವೆಯ ಮೂಲಕ ಗಮನ ಸೆಳೆದಿದ್ದಾರೆ.
ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿ ಅಲ್ಪಸಂಖ್ಯಾತ ಇಲಾಖೆಯ ನಿರ್ದೇಶಕರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ತಂದು ವಿಶೇಷವಾಗಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮಿಸಿದರು ಅದೇ ರೀತಿಯಲ್ಲಿ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ವಖ್ಫ್ ಮಂಡಳಿಯ ಸದಸ್ಯರಾಗಿ ಕೆ.ಎ.ಎಸ್ ಅಸೋಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ 2016ರಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮಟ್ಟರವಲ್ಲದೆ ಇಡೀ ದೇಶದ ಜನರನ್ನು ತಲ್ಲಣಗೊಳಿಸಿದ ಕೋರೊನಾ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಮಂಡಳಿಯ ಮೂಲಕ ಅನೇಕ ರೀತಿಯ ಸೇವಾ ಸೌಲಭ್ಯಗಳನ್ನು ಕೂಲಿ ಕಾರ್ಮಿಕರಿಗೆ ಒದಗಿಸಿ ಮಾದರಿಯಾಗಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಕೋಲಾರದ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಈ ಹಿಂದೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಅಕ್ರಂಪಾಷ ಅವರು ಕೋಲಾರ ಜಿಲ್ಲೆಯ ಇತಿಹಾಸ ಮತ್ತು ಸ್ಥಳೀಯ ಸಮಸ್ಯೆಗಳನ್ನು ಆರತ್ತಿದ್ದಾರೆ ಹೀಗಾಗಿ ಅವರು ಕೋಲಾರ ಜಿಲ್ಲಾಧಿಕಾರಿಯಾಗಿ ತಮ್ಮ ಸೇವಾ ಕಾರ್ಯದ ಮೂಲಕ ಮತ್ತಷ್ಟು ಜನಪ್ರಿಯ ಅಧಿಕಾರಿಯಾಗಲು ಅವಕಾಶ ಲಭಿಸಿದೆ.