ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕೋವಿಡ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಖಾಸಗಿ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಕುಟುಂಬಗಳಿಗೆ ಮಾಸಿಕ
ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಶಿರಸ್ತೇದಾರ್‍ಗೆ ನೀಡಲಾಯಿತು.
ಮುಖಂಡರಾದ ಎನ್.ವೀರಪ್ಪರೆಡ್ಡಿ, ಕೆ.ಎನ್.ರಾಮಪ್ಪ, ಎಚ್.ವಿ.ನಾರಾಯಣಸ್ವಾಮಿ, ಟಿ.ಎಚ್.ಆಂಜಲಪ್ಪ, ಎಲ್.ವಿ.ರಮೇಶ್, ಎನ್.ನಾಗಭೂಷಣ್ ಇದ್ದರು.