JANANUDI.COM NETWORK

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿದ ಹೈಕೋರ್ಟ್ “ರಾಜ್ಯದಲ್ಲಿ ಲಾಕ್ ಡೌನ್ ಸಮಯದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು” ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಹಾಗೇ ಮುಂದುವರೆದು “ಜನರು ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು” ತಿಳಿಸಿದೆ
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಧೀಶ ಎ.ಎಸ್.ಓಕ ಹಾಗೂ ನ್ಯಾಯಧೀಶ.ಅರವಿಂದ ಕುಮಾರ್ ಅವರಿದ್ದ ನ್ಯಾಯ ಪೀಠ ಈ ಸೂಚನೆಗಳನ್ನು ನೀಡಿದೆ
ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡುತ್ತಿದ್ದಾರೆಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದರು. ಹಾಗೇ ಮುಂದಿನ ವಿಚಾರಣೆಯನ್ನು ನ್ಯಾಯಪೀಠ ನಾಳೆ ಮೇ.13ಕ್ಕೆ ವಿಚಾರಣೆ ಮುಂದೂಡಿದೆ.