JANANUDI.COM NETWORK

ಕುಂದಾಪುರ: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಆರೋಗ್ಯ ಮೇಳ ಮತ್ತು ಆರೋಗ್ಯ ಕಾರ್ಯಕ್ರಮ ಗಳ ಜಾಗ್ರತಿ ಅಭಿಯಾನ:- ತಾರೀಕು 23-04-2022 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯದ ಅಮ್ರತ್ ಮಹೋತ್ಸವದ ಅಂಗವಾಗಿ ಮೇಲಿನ ಕಾರ್ಯಕ್ರಮ ಜರಗಿತು .
ಕಾರ್ಯಕ್ರಮಕ್ಕಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕವು ಒಂದು ಲಕ್ಷ ರೂಪಾಯಿ ಮೊತ್ತದ ಔಷಧ ವನ್ನು ಉಚಿತವಾಗಿ ನೀಡಿತು.
ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮ ದಲ್ಲಿ ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಗಣೇಶ್ ಆಚಾರ್ಯ, ಎ. ಮುತ್ತಯ್ ಶೆಟ್ಟಿ, ಎನ್ ಸದಾನಂದ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.