ಕೋಲಾರ ನವೆಂಬರ್ 11 : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಿದರು.
ಶನಿವಾರ ಕೋಲಾರ ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕಲ್ವಮಂಜಲಿ ರಾಮುಶಿವಣ್ಣ ಜಿಲ್ಲೆಯಲ್ಲಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು ಕೊಲೆ ದರೋಡೆ ಮಟ್ಕಾ ಜೂಜು ಇನ್ನು ಸುಮಾರು ಕಾನೂನುಬಾಹಿರ ಚಟುವಟಿಕೆಗಳು ಜಿಲ್ಲೆಯಲ್ಲಿ ತಾಂಡವಾಡುತ್ತಿದ್ದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿರುವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಪೂರ್ಣ ಅಧಿಕಾರವನ್ನು ಪೊಲೀಸರಿಗೆ ನೀಡಬೇಕೆಂದು ಒತ್ತಾಯಿಸಲಾಯಿತು.
ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತ ವಿರೋಧಿ ಕಾಯ್ದೆಗಳಾದ ಎಪಿಎಂಸಿ ಕಾಯ್ದೆ, ಭೂಸ್ವಾಜಿನ ಕಾಯ್ದೆ ಕೆಪಿಟಿಸಿಎಲ್ ಕಾಯ್ದೆಯನ್ನು ವಾಪಸ್ ಪಡೆಯಲು ಹಾಗೂ ರೈತರ ಕೃಷಿ ಪಂಪ್ ಸೆಟ್ಗಳಿಗೆ ಮೀಟರ್ ಅಳವಡಿಸಬಾರದೆಂದು ಒತ್ತಾಯಿಸಲಾಯಿತು.
ಕೆ ಸಿ ವ್ಯಾಲಿ ಮತ್ತು ಎಚ್ ಎನ್ ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣ ಮಾಡಿಕೊಡಿ ಎಂದು ಮನವಿ ಸಲ್ಲಿಸಿಲಾಯಿತು.
ಈ ಸಂದರ್ಭದಲ್ಲಿ ರೈತ ನಾಯಕ ಪ್ರೊಫೆಸರ್ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕ ಅಧ್ಯಕ್ಷ ಕಲ್ವಮಂಜಲಿ ರಾಮು ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ನಾರಾಯಣಸ್ವಾಮಿ, ಮಾಲೂರು ತಾಲ್ಲೂಕು ಅಧ್ಯಕ್ಷ ತಿಪ್ಪಸಂದ್ರ ಹರೀಶ್ಗೌಡ, ಕಾಡುಕಚ್ಚನಹಳ್ಳಿ ವಿಶ್ವನಾಥ್ಗೌಡ, ಮುಳಬಾಗಿಲು ತಾಲೂಕು ಅಧ್ಯಕ್ಷ ಜಗನ್ನಾಥ್ ರೆಡ್ಡಿ, ಕೋಲಾರ ತಾಲೂಕು ಅಧ್ಯಕ್ಷ ಇನ್ನು ಮುಂತಾದವರು ಇದ್ದರು.