JANANUDI.COM NETWORK
ಬೆಂಗಳೂರು: ರಾಜ್ಯದಲ್ಲಿ ಸರಕಾರ ಮತ್ತೆ ನೈಟ್ ಕಫ್ರ್ಯೂ ಜಾರಿ ಮಾಡಿದೆ ಎಂದು ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ, ಡಿ. 28 ರಿಂದ ರಾತ್ರಿ 10 ಠಿಂದ ಬೆಳಗ್ಗೆ 5 ರ ವರೆಗೆ ಅಂದರೆ 10 ದಿನಗಳ ಕಾಲ ನೈಟ್ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಕೊರೊನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹಾಗೆಯೇ ಸಭೆ ಸಮಾರಂಭ, ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ. 50 ರಷ್ಟು ಮಾತ್ರ ಅವಕಾಶ ಇರುತ್ತದೆ ಎಂದು ಅವರುಹೇಳಿದ್ದಾರೆ. ರಾತ್ರಿ 10 ಗಂಟೆ ನಂತರ ಸಿನಿಮಾ ಥಿಯೇಟರ್ ಗಳು ಕೂಡ ಬಂದ್ ಆಗಲಿದೆ.