ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್

JANANUDI.COM NETWORK

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ವ್ಯಾಪಕ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಛತ್ತೀಸ್ಗಢದಲ್ಲೂ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೊ ಆಲರ್ಟ್ ನೀಡಲಾಗಿದೆ. ಸೆ.8ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ.10 ಮತ್ತು 11ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಎಲ್ಲೊಅಲರ್ಟ್ ಷಿಸಲಾಗಿದೆ .