ಭಾರತದಲ್ಲಿ ಭಾನುವಾರ ಒಂದೇ ದಿನ 50 ವೈದ್ಯರು ಕೊರೊನಾ ಸೋಂಕಿಗೆ ಬಲಿ- ಕೊರೊನಾಗೆ ಬಲಿಯಾದ ವೈದ್ಯರ ಸಂಖ್ಯೆ 1000 ಗಡಿ ದಾಟಿದೆ

JANANUDI.COM NETWORK

ನವದೆಹಲಿ: ಕೊರೊನಾ ಎರಡನೇ ಅಲೆಯಿಂದಾಗಿ ಸಾಮಾನ್ಯ ಜನತೆಯ ಜೊತೆಯಲ್ಲೇ ಫ್ರಂಟ್ ಲೈನ್ ವರ್ಕರ್ಸ್ ಆಗಿರುವ ವೈದ್ಯರೂ ಹೆಚ್ಚಿನ ಸಂಖ್ಯೆಯಲ್ಲಿ ತೊಂದರೆಗೊಳಗಾಗಿದ್ದು, ಭಾನುವಾರ ಒಂದೇ ದಿನ ಸುಮಾರು 50 ವೈದ್ಯರು ಸೋಂಕಗೆ ಬಲಿಯಾಗಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ತಿಳಿಸಿದೆ.
ಕೊರೊನಾ ಸೋಂಕಿನ ಮೊದಲ ಅಲೆಗೆ ಸಿಲುಕಿ ಸುಮಾರು 736 ವೈದ್ಯರು ಮೃತಪಟ್ಟಿದ್ದು. ಈ ಹಿನ್ನೆಲೆಯಲ್ಲಿ ಲಸಿಕೆ ದೊರೆತ ತಕ್ಷಣ ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಫ್ರಂಟ್ ಲೈನ್ ವರ್ಕರ್ಸ್ ಗೆ ಲಸಿಕೆ ಹಾಕುವ ಅಭಿಯಾನ ಜನವರಿಯಲ್ಲಿ ಪ್ರಾರಂಭವಾಗಿತ್ತು.
ಆದರೆ ಇದುವರೆಗೆ ಕೇವಲ 66% ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಎರಡೂ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎರಡನೇ ಅಲೆ ಕಾಣಿಸಿಕೊಂಡ ಬಳಿಕವೂ ಸುಮಾರು 244 ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೊನಾಗೆ ಬಲಿಯಾದ ವೈದ್ಯರ ಸಂಖ್ಯೆ 1000 ದ ಗಡಿ ದಾಟಿದೆ. ಮೃತಪಟ್ಟ ವೈದ್ಯರ ಪೈಕಿ ಬಿಹಾರದಲ್ಲಿ 69, ಉತ್ತರ ಪ್ರದೇಶದಲ್ಲಿ 34 ಮತ್ತು ದೆಹಲಿಯಲ್ಲಿ 27 ವೈದ್ಯರು ಮೃತಪಟ್ಟಿದ್ಧಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಷಿಯೇಷನ್ ತಿಳಿಸಿದೆ.
ದೇಶದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗಳಿಗೆ ಲಸಿಕೆ ಅಭಿಯಾನ ಪ್ರಾರಂಭವಾದ ಬಳಿಕ ಶೇ. 66 ಫ್ರಂಟ್ ಲೈನ್ ವರ್ಕರ್ಸ್ ಮಾತ್ರ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಪ್ರೇರೇಪಿಸಲಾಗುತ್ತಿದೆ. ಅದರಲ್ಲೂ ಹಲವು ವೈದ್ಯರು ಲಸಿಕೆ ಪಡೆಯದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಮೊದಲು ಲಸಿಕೆ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಇದೇ ವೇಳೆ ದೇಶದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕೊರತೆ ಇದೆ. ಹಾಗಾಗಿ ಹಲವರು ವೈದ್ಯರು ತಮ್ಮ ಶಿಫ್ಟ್ ಗಿಂತ ಹೆಚ್ಚಿನ ಸಮಯ ಕೆಲಸ ಮಾಡಬೇಕಾಗುತ್ತದೆ. ಇದು ಅವರಿಗೆ ಸೋಂಕು ತಗುಲುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
ದೇಸದಲ್ಲಿ ಸುಮಾರು 12 ಲಕ್ಷಕ್ಕೂ ಹೆಚ್ಚು ವೈದ್ಯರಿದ್ದಾರೆ. ಅವರ ಪೈಕಿ ಕೇವಲ 3.5 ಲಕ್ಷ ವೈದ್ಯರು ಮಾತ್ರ ನಮ್ಮಲ್ಲಿ ಸದಸ್ಯರಾಗಿದ್ದಾರೆ. ಹಾಗಾಗಿ ಕೊರೊನಾದಿಂದಾಗಿ ಮೃತಪಟ್ಟ ವೈದ್ಯರ ಸಂಖ್ಯೆ ಇನ್ನಷ್ಟು ಹೆಚ್ಚಿರುವ ಸಾಧ್ಯತೆ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಡಾ. ಜಯೇಶ್ ಲೀಲೆ ತಿಳಿಸಿದ್ದಾರೆ
.


.