ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪಟ್ಟಣದಲ್ಲಿ ಜು.10 ರಿಂದ ಮರುಬಳಕೆ ಸಾಧ್ಯವಿಲ್ಲದ ಪ್ಲಾಸ್ಟಿಕ್ ಪದಾರ್ಥಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಈ ವಿಷಯದಲ್ಲಿ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಮಾತನಾಡಿ, ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟದಿಂದ ಜನ, ಜಾನುವಾರು ತೊಂದರೆ ಅನುಭವಿಸುವಂತಾಗಿದೆ. ಆಕಸ್ಮಿಕವಾಗಿ ಪ್ಲಾಸ್ಟಿಕ್ ಸೇವಿಸಿದ ಜಾನುವಾರುಗಳು ಸಾವನ್ನಪ್ಪುತ್ತಿವೆ. ಕೊಳೆಯದ, ಮರು ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ಭೂ ಮಾಲೀನ್ಯಕ್ಕೆ ಕಾರಣವಾಗಿದೆ. ಚರಂಡಿಗಳಲ್ಲಿ ನಿಂತು ನೀರು ಸರಾಗವಾಗಿ ಹರಿದು ಹೋಗದಂತೆ ತಡೆಯುತ್ತಿದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸಿಎಒ ರಾಜೇಶ್ವರಿ, ನಾಗೇಶ್, ಸಂತೋಷ್, ಸುರೇಶ್, ಶ್ರೀನಾಥ್, ಚಂದ್ರಶೇಖರ್ ಇದ್ದರು.