JANANUDI.COM NETWORK
ಉಡುಪಿ: ಜಿಲ್ಲೆಯ ಕಾಪು ತಾಲೂಕಿನಲ್ಲಿ ಮೂವರು ಕಳ್ಳ ಫಕೀರರು ಬಂದು ಮಹಿಳೆ ಮೇಲೆ ಧೂಪ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿ ಅವರಿಂದ ಚಿನ್ನಾಭರಣವನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಫಕೀರರ ವೇಷ ಧರಿಸಿ ಬಂದ ಮೂವರು ಕಳ್ಳ ಫಕೀರರು, ನಗದನ್ನು ಎಗರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಟಪಾಡಿಯ ಏಣಗುಡ್ಡೆ ಗ್ರಾಮದ ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಆಗಮಿಸಿದ ಮೂವರು, ಸುತ್ತಮುತ್ತಲ ಮನೆಗಳಿಗೆ ಭೇಟಿ ನೀಡಿ ಮನೆಯೊಂದಕ್ಕೆ ತೆರಳಿದ ಮೂರು ಮಂದಿ ನಕಲಿ ಫಕೀರ ವೇಷಧಾರಿಗಳು ಮನೆಯ ಸುತ್ತಲೂ ಓಡಾಡಿ ತಮ್ಮ ಹಾಡಿನ ಮೂಲಕ ಮನೆ ಮಂದಿ ಹೊರಬರುವಂತೆ ಮಾಡಲು ಸಫಲರಾಗಿದ್ದು, ನಂತರ ಹೊರ ಬಂದ ಮನೆಯ ಮಹಿಳೆಯ ಮೇಲೆ ಧೂಪ ಬೂದಿ ಮಿಶ್ರಿತ ಹೊಗೆಯನ್ನು ಪ್ರಯೋಗಿಸಿದ್ದಾರೆ.
ಈ ವೇಳೆ ಮಹಿಳೆ ತನ್ನ ಮೈಮೇಲಿನ ಚಿನ್ನಾಭರಣ ಮತ್ತು ಮನೆಯೊಳಗಿನಿಂದ ನಗದನ್ನು ತಂದು ಕೊಟ್ಟು ಫಕೀರರ ಜೋಳಿಗೆ ಹಾಕಿದ್ದಾರೆಂದು ಹೇಳಲಾಗುತ್ತದೆ. ಮಹಿಳೆಯಿಂದ ಚಿನ್ನಾಭರಣ ಮತ್ತು ನಗದು ಸಿಕ್ಕಿದ ಬಳಿಕ ಫಕೀರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಆಮೇಲೆ ಮಹಿಳೆ ಎಚ್ಚರಗೊಂಡುತಾನು ಮೋಸ ಹೋಗಿರುವುದು ಬೆಳಕಿಗೆ ಬಂದಿದೆ.
ವೇಷಧಾರಿ ನಕಲಿ ಫಕೀರರ ಜೋಳಿಗೆಯನ್ನು ತಾನಾಗಿಯೇ ತುಂಬಿರುವುದಾಗಿ ಮಹಿಳೆ ಮಾಹಿತಿ ನೀಡಿದ್ದಾಳೆಂದು ಹೇಳಲಾಗುತಿದ್ದರೂ, ಧೂಪ ಮಿಶ್ರಿತ ಹೊಗೆ ಪ್ರಯೋಗಿಸಿ ಜನರ ಮೂರ್ಚೆ ತಪ್ಪಿಸಿ ದರೋಡೆ ಮಾಡಿರುವುದು ಕೇಳಿದ್ದೇವೆ. ಇದು ಕೂಡ ಹಾಗೇ ಇರಬಹುದು. ಮೂರು ಜನ ಫಕೀರರು ಹೆಣ್ಗಸಿನ ಮನೆಯಂಗಳದಲ್ಲಿ ಓಡಾಡಿದ ಮತ್ತು ಪೇಟೆಯಲ್ಲಿ ನಡೆದಾಡಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಬಿವೀಡಿಯೊ ಈಗ ವೈರಲ್ ಆಗಿದೆ.