ಅಗತ್ಯ ವಸ್ತುಗಳ ಖರೀದಿಗೆ ಹತ್ತಿರದ ಅಂಗಡಿಗಳಿಗೆ ವಾಹನದಲ್ಲಿ ಹೋಗಬಹುದು! ಆದರೆ ಉಡುಪಿ ಜಿಲ್ಲೆಯಲ್ಲಿ ವಿಶೇಷ ರೂಲ್ಸ್ ವಾಹನಗಳು ರಸ್ತೆಯಲ್ಲಿ ಇಳಿಯುವಂತಿಲ್ಲ.

JANANUDI.COM NETWORK

ಬೆಂಗಳೂರು: ರಾಜ್ಯದಾದ್ಯಂತ ಸೋಮವಾರದಿಂದ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ, ಅಗತ್ಯ ವಸ್ತುಗಳ ಖರೀದಿಗೆ ಕಾಲ್ನಡಿಗೆಯಲ್ಲೇ ಹೋಗಬೇಕು ಎಂಬ ನಿಯಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ.ಪ್ರವೀಣ್ ಸೂದ್ ಸಮೀಪದ ಅಂಗಡಿಗಳಿಗೆ, ಅಂದರೆ ನಿಮ್ಮ ಏರಿಯಾದಳೊಗೆ ಹೋಗಲು ವಾಹನ ಬಳಸಲು ಅನುಮತಿ ನೀಡಿದ್ದಾರೆ,

ಆದರೆ ಉಡುಪಿ ಜಿಲ್ಲಾಧಿಆಕಾರಿ ಜಿ. ಜಗದೀಶ್ ತಮ್ಮದೇ ರೂಲ್ಸ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ವಾಹನಗಳನ್ನು ರಸ್ತೆಯಲ್ಲಿ ಇಳಿಸಬಾರದೆಂದು ಖಡಕ್ ಸೂಚನೆಯನ್ನು ನೀಡಿದ್ದಾರೆಂದುತಿಳಿದು ಬಂದಿದೆ.

ತಾರೀಕು ಹತ್ತರ ಲಾಖ್ ಡೌನ್ ನಿಯಮಗಳಲ್ಲಿ ಮಾರ್ಪಾಡುಗಳಾಗಿವೆ.

   ಪೊಲೀಸರು ಜನರಿಗೆ ಅಮಾವೀಯತೆಯಿಂದ ಹೊಡೆಯುವುದು, ಖರೀದಿಗಾರರ ಬವಣೆಯಿಂದ ಲಾಕ್ಡೌನ್ ನಿಯಮಗಳಲ್ಲಿ ಬದಲಾವಣೆ ಮಾಡಿದ್ದಾರೆ.   

ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೂ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಖಡಕ್ ರೂಲ್ಸ್ ರೂಪಿಸಿದೆ.

ಪರಿಷ್ಕೃತ ಮಾರ್ಗಸೂಚಿ ಬಳಿಕ ಮಾಧ್ಯಮ  ಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು. ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೊಸ ಮಾರ್ಗಸೂಚಿಯು ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಹೀಗಾಗಿ, ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಪರಿಷ್ಕೃತ ಮಾರ್ಗಸೂಚಿ

ಈ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.

ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.

ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.

ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.

ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.

ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.

ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.

ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.