ಮದುವೆ ಸಮಾರಂಭಗಳಿಗೆ ಹೊಸ ನಿಯಮ;ಮನೆಯಲ್ಲೇ ಮದುವೆ, 40 ಜನರಿಗಷ್ಟೆ ಅವಕಾಶ

JANANUDI.COM NETWORK


ಬೆಂಗಳೂರು:ಮೇ. ಸರ್ಕಾರ ಮದುವೆ ಸಮಾರಂಭಗಳಿಗೆ ಹೊಸ ನಿಯಮಗಳನ್ನು ಜ್ಯಾರಿ ಮಾಡಿದೆ. ಈಗಾಗಲೇ ನಿಗದಿಯಾದ ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೇ ಮದುವೆ ಸಮಾರಂಭದಲ್ಲಿ ಕುಟುಂಬದ ಆಪ್ತರು ಸೇರಿ ಕೇವಲ 40 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
ಕಲ್ಯಾಣ ಮಂಟಪ ಅಥವಾ ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶದ್ ಹೊರಡಿಸಿದೆ. ಈ ಕುರಿತು ಪರಿಷ್ಕೃತ ಆದೇಶ ಕಂದಾಯ ಇಲಾಖೆಯ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಶನಿವಾರ ಹೊರಡಿಸಿದ್ದಾರೆ.
‘ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಿಸಿದ ಜಂಟಿ ಆಯುಕ್ತರಿಂದ ಹಾಗೂ ಜಿಲ್ಲೆಗಳಲ್ಲಿ ಆಯಾ ವ್ಯಾಪ್ತಿಯ ತಹಶೀಲ್ದಾರ್ಗಳಿಂದ ಮದುವೆ ಆಮಂತ್ರಣದ ಜೊತೆ ಅರ್ಜಿ ಸಲ್ಲಿಸಿ, ಮದುವೆ ಸಮಾರಂಭಗಳನ್ನು ನಡೆಸಲು ಅನುಮತಿ ಪಡೆಯಬೇಕು. ಈ ಅರ್ಜಿ ಆಧರಿಸಿ 40 ಪಾಸ್ ಗಳನ್ನು ನೀಡಲಾಗುವುದು. ಪಾಸ್ ಇದ್ದವರಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಅನುಮತಿ ಇರುವುದೆಂದು’ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.