ಕುಂದಾಪುರ: ಕುಂದಾಪುರದ ತೆಕ್ಕಟ್ಟೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಕೆಡವಿದ್ದಾರೆ. ಬಸವ ವಸತಿ ಯೋಜನೆಯಲ್ಲಿ ಮಂಜೂರಾಗಿದ್ದ ಮನೆಯ ಅನುದಾನ ಬಿಡುಗಡೆಗೆ ಲಂಚದ ಬೇಡಿಕೆ ಇಟ್ಟ ಆರೋಪಿ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ.
ಬೇಳೂರು ಗ್ರಾಮ ಪಂಚಾಯಿತಿ ಪಿ ಡಿ ಓ ಜಯಂತ್ ಎಂಬತ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಆರೋಪಿ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಗೆಬೆಟ್ಟು ನಿವಾಸಿ ರಾಧಾ ಮರಕಾಲ್ತಿ ಎಂಬುವರ ಜಾಗದಲ್ಲಿ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿದ್ದು ಅನುದಾನ ಬಿಡುಗಡೆಗೆ 10 ಸಾವಿರ ರೂಪಾಯಿ ಲಂಚ ನೀಡುವಂತೆ ಆರೋಪಿತ ಪಿಡಿಒ ಜಯಂತ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ರಾಧಾ ಮರಕಾಲ್ತಿಯವರ ಪುತ್ರಿ ಸುಜಾತ ಎಂಬುವರು ಉಡುಪಿ ಲೋಕಾಯುಕ್ತ ಇಲಾಖೆಗೆ ಲಿಖಿತ ದೂರು ನೀಡಿದ್ದರು. ದೂರನ್ನು ಆಧರಿಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ಲೋಕಾಯುಕ್ತ ಅಧೀಕ್ಷಕ ಸಿ ಎ ಸೈಮನ್ ಅವರ ಮಾರ್ಗದರ್ಶನದಲ್ಲಿ ತೆಕ್ಕಟ್ಟೆಯ ಜಂಕ್ಷನ್ ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಎಂ. ಹಾಗೂ ಸಿಬ್ಬಂದಿ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ್, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಈ ಕಾರ್ಯಾಚರಣೆ ನಡೆಸಿದ್ದಾರೆ.