JANANUDI.COM NETWORK

ನವದೆಹಲಿ: ಮೇ. ೮.”ದೇಶದಲ್ಲಿ 9,02,291 ಸೋಂಕಿತರು ಆಮ್ಲಜನಕದ ಸಹಾರದಿಂದ ಮತ್ತು 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್ ಸಹಾರದಿಂದ ಆಸ್ಪತ್ರೆಗಳಲ್ಲಿ ಇದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರದಂದು ತಿಳಿಸಿದ್ದಾರೆ.
ಸಾಂಕ್ರಾಮಿಕ ರೋಗದ ಪರಿಸ್ಥಿತಿ ಕುರಿತು ಚರ್ಚಿಸಲು ಸಚಿವರ ತಂಡದ ಜೊತೆ (ಜಿಒಎಂ)ದ 25ನೇ ವರ್ಚುವಲ್ ಸಭೆ ಉದ್ದೇಶಿಸಿ ಮಾತನಾಡಿದ ಹರ್ಷವರ್ಧನ್ ಮಾತನಾಡುತಿದ್ದರು “ದೇಶಾದ್ಯಂತ ಶೇ. 1.34 ರಷ್ಟು ಕೋವಿಡ್ ಸೋಂಕಿತರು ಐಸಿಯುನಲ್ಲಿದ್ದು, ಶೇ. 3.70 ಕೋವಿಡ್ ರೋಗಿಗಳು ಆಮ್ಲಜನಕದ ಆದಾರದಲ್ಲಿ ಮತ್ತು ಶೇ.0.39 ರಷ್ಟು ಪ್ರಕರಣಗಳು ವೆಂಟಿಲೇಟರ್ ಆದಾರದಲ್ಲಿ ಇದ್ದಾರೆ ಎಂದು ಹೇಳಿದರು.
ದೇಶದಲ್ಲಿ ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.