

ಕುಂದಾಪುರ : ನಾವು ಎಲ್ಲಾ ಧರ್ಮದವರ ಜೊತೆಯಿದ್ದೇವೆ, ನಮ್ಮದು ಜಾತ್ಯಾತೀತ ಪಕ್ಷ, ಜೊತೆಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್. ಅದರಲ್ಲಿ ಇರುವ ಪ್ರಮುಖ ಐದು ಅಂಶಗಳು. ಗೃಹಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಈ ಭರವಸೆಗಳನ್ನು ನಾವು ನೀಡಿದ್ದೆವೆ. ಖಂಡಿತಾ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಇವುಗಳನ್ನು ಅನುಷ್ಟಾನ ಮಾಡಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಹೇಳಿದರು. ಅವರು ಕುಂದಾಪುರದ ಹೋಟೆಲ್ ಶೆರೊನ್ ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಇನ್ನೂ ನೆನಗುದಿಗೆ ಬಿದ್ದಿದೆ. ಸಿಆರ್ಜೆಡ್, 94ಸಿ, 94ಸಿಸಿ, ಅಕ್ರಮ ಸಕ್ರಮ ಸಮಸ್ಯೆಗಳಿವೆ. ಕುಂದಾಪುರದಲ್ಲಿ ಆರ್.ಟಿ.ಓ ಕಛೇರಿ ಬೇಡಿಕೆ ಇದೆ. ಕೋಡಿ ಕನ್ಯಾಣ ಭಾಗದಲ್ಲಿ ಹಕ್ಕುಪತ್ರ ಸಮಸ್ಯೆ, ನದಿ ದಂಡೆಯ ಸಮಸ್ಯೆ, ಗಂಗೊಳ್ಳಿ-ಕುಂದಾಪುರ ಸೇತುವೆ ಬೇಡಿಕೆ, 44 ವರ್ಷಗಳಾದರೂ ಬಾಕಿ ಇರುವ ವರಾಹಿ ನೀರಾವರಿ ಯೋಜನೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ ಕಾಲುವೆಗಳ ನಿರ್ಮಾಣಗೊಂಡಿಲ್ಲ. ನಾನು ಶಾಸಕನಾಗಿ ಆಯ್ಕೆಯಾದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಕುಂದಾಪುರ ಕ್ಷೇತ್ರದಲ್ಲಿ ಯುವಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ನೀಡುತ್ತಿದ್ದಾರೆ. ನಾನು ಹೋದ ಎಸ್ಟೊ ಕಡೆ ಯುವಕರು, ನಾವು ಇನ್ನು ಬಿಜೆಪಿ ಯಲ್ಲಿ ಕೆಲಸ ಮಾಡುವುದಿಲ್ಲ, ಎಂದು ನಮ್ಮ ಪಕ್ಷ ಸೇರಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಸಿಗುತ್ತಿರುವ ಬೆಂಬಲ ನೋಡಿದಾಗ ಕಾಂಗ್ರೆಸ್ ಗೆಲ್ಲುವುದು ಖಂಡಿತವಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳದ ಪ್ರಸ್ತಾಪದ ಮಾಧ್ಯಮದರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬಜರಂಗದಳ ವಿರೋಧ ಸ್ಪಷ್ಟವಾಗಿ ಹೇಳಿಲ್ಲ. ಇದನ್ನು ಬಿಜೆಪಿಗರು ಹತಾಶರಾಗಿ ಸುಳ್ಳು ವದಂತಿಯನ್ನು ಹಬ್ಬಿಸುತಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಹೇಳಲು ಬೇರೆ ವಿಷಯಗಳಿಲ್ಲ. ಚುನಾವಣೆಯ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ, ಇವತ್ತು ಬಿಜೆಪಿಗರು ಸೋಲಿನ ಭಯದಿಂದ ಹತಾಸರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಹಿಂದು ವಿರೋಧಿಯಲ್ಲ, ನಮ್ಮ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರು ಧಾರ್ಮಿಕ ವ್ಯವಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು. ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಪ್ರತಿವರ್ಷ ಶ್ರೀರಾಮ ಭಜನೆಯನ್ನು ನೆಡೆಸಿಕೊಂಡು ಬರುತ್ತಿದ್ದಾರೆ. ಪರಿಸರದ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ದಾರ ಸಮಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಹಾಗಾಗಿ ಇಡೀ ಕ್ಷೇತ್ರದ ಜನರಿಗೆ ದಿನೇಶ ಹೆಗ್ಡೆ ಅವರ ವ್ಯಕ್ತಿತ್ವದ ಅರಿವಿದೆ. ಪ್ರತಿ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಚುನಾವಣೆ ಹೋಗುತ್ತಾರೆ. ಹಿಂದುತ್ವ, ಹಿಂದು ಸಂಘಟನೆಯ ಬಗ್ಗೆ ಬಿಜೆಪಿಗೆ ಅಷ್ಟೊಂದು ಅಭಿಮಾನ ಇದ್ದರೆ ಹಿಂದೂ ನಾಯಕರುಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಅವರಿಗೆ ಏಕೆ ಬೆಂಬಲ ಕೊಡುವುದಿಲ್ಲಾ. ಪುತ್ತೂರು, ಕಾರ್ಕಳದಲ್ಲಿ ಹಿಂದು ಸಂಘಟನೆಯ ಮುಖಂಡರು ಸ್ಪರ್ಧೆ ಮಾಡಿದ್ದಾರೆ. ಅವರನ್ನು ಏಕೆ ಬೆಂಬಲಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ಕುಂದಾಪುರ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ. ಅಮಾಸೆಬೈಲು ಗ್ರಾಮದಲ್ಲಿ 11 ಶಾಲೆಗಳಿದ್ದು 3 ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಶಾಲೆಯಾಗಿದೆ. ಅಮಾಸೆಬೈಲು ಗ್ರಾಮದಲ್ಲಿ ಹಿಂದು ರುದ್ರಭೂಮಿ ಇಲ್ಲ, ಜೂನಿಯರ್ ಕಾಲೇಜು ಬೇಡಿಕೆ ಇದೆ. ವಾರಾಹಿ ನೀರು ಅಮಾಸೆಬೈಲು ಗ್ರಾಮಕ್ಕೆ ಸಿಗುತ್ತಿಲ್ಲ. ಕೃಷಿಕರ ಪಾಡು ಹೇಳತಿರದು. ಇಷ್ಟೊಂದು ಸಮಸ್ಯೆ ಅಮಾಸೆಬೈಲು ಗ್ರಾಮದಲ್ಲಿದ್ದರೂ ಕೂಡಾ ಕಳೆದ 30 ವರ್ಷಗಳಿಂದ ಶಾಸಕರ ನಿಕಟ ಸಂಪರ್ಕ ಇರುವ ಕಿರಣ್ ಕೊಡ್ಗಿಯವರಿಂದ ಏಕೆ ಪರಿಹರಿಸಲು ಆಗಲಿಲ್ಲ ಎಂದು ಪ್ರಶ್ನಿಸಿದರು.
ಕುಂದಾಪುರ ಕ್ಷೇತ್ರದಲ್ಲಿ ಪಂಚಗಂಗಾವಳಿ ನದಿಗಳಿದ್ದು, ಕೇರಳದಂತೆ ಹಿನ್ನಿರಿನ ನದಿಗಳಿವೆ, ಆದರೆ ಪ್ರವಾಸೊದ್ಯಮ ಎನೊಂದು ಅಭಿವ್ರದ್ದಿಯಾಗಲಿಲ್ಲಾ ಎಂಬ ಪ್ರಶ್ನೆಗೆ ಸಿ.ಆರ್.ಜಡ್ ಸಮಸ್ಯೆ ಇದೆ ಎಂದು ಹೇಳಲಾಯಿತು, ಆದರೆ ಪತ್ರಕರ್ತರು ಸಿ.ಆರ್.ಜಡ್. ಇತ್ತೀಚಿನ ಸಮಸ್ಯೆ. ಹಲವು ವರ್ಷಗಳಿಂದ ಕಾಂಗ್ರೆಸ್ ಇರುವಾಗ ಸಿ.ಆರ್.ಜಡ್ ಸಮಸ್ಯೆ ಇರಲಿಲ್ಲ. ಬರೆ ಪ್ರವಾಸೊದ್ಯೋಮ ಅಂತಾ, ಹಣ ಪೋಲು ಮಾಡಿದ್ದಶ್ಟೆ ಸಾಧನೆ ಅಂದಾಗ ’ನಾವು ಶಾಸಕರಾಗಿ ಆಯ್ಕೆಯಾದರೆ, ಪ್ರವಾಸೋದ್ಯಮದ ಬಗ್ಗೆಯು ಚಿಂತಿಸುತ್ತೇವೆ ಎಂದು ಸಮಾಧಾನ ಹೇಳಿದರು.
ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕೃಷ್ಣದೇವ ಕಾರಂತ, ವಿನೋದ್ ಕ್ರಾಸ್ತ್, ಅಶೋಕ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.





