ಬೆಂಗಳೂರು: ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅ.2ರ ವರೆಗೆ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣ ಇದ್ದು ಕೆಲವೊಮ್ಮೆ ಗುಡುಗು ಮಿಂಚು ಕಾಣಿಸಿಕೊಳ್ಳಬಹುದು ಎಂದು ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ರಿಂದ ಅ.1ರ ಪರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಸೆ.30 ಹಾಗೂ ಅ.1 ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.