ರಾಜ್ಯದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ;ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ

JANANUDI NEWS NETWORK       (EDITOR : BERNARD D’COSTA)


ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು. ಮುಂಜಾನೆಯಿಂದಲೇ ವರುಣಾನ ಆರ್ಭಟ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳು ಭಾರಿ ಮಳೆಯಿಂದ ತತ್ತರಿಸಿ ಹೋಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ. ಧಾರಾಕಾರ ಮಳೆಯಾಗುತ್ತಿದ್ದು, ವಿದ್ಯುತ್‌ ಕಂಬಗಳು, ಬೃಹತ್‌ ಮರಗಳು ನೆಲಕ್ಕೆ ಉರುಳಿವೆ,. ಉತ್ತರ ಕನ್ನಡ, ದಕ್ಷಿಣ:ಕನ್ನಡ ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ, ಹಾಗೂವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.ತೋಡು, ಹಳ್ಳ, ಗುಂಡಿ, ಹೊಳೆ ನದಿಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಮನೆ ಜಮೀನುಗಳು ಜಲಾವ್ರತವಾಗಿವೆ.
ಚಿಕ್ಕಮಗಳೂರಿನ ಮೂರು ತಾಲೂಕುಗಳಾದ ಶೃಂಗೇರಿ, ಕಳಸ ಹಾಗೂ ಮೂಡಿಗೆರೆ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ. ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತವುಂಟಾಗಿದೆ. ಮಳೆಯ ಆರ್ಭಟಕ್ಕೆ ಮನೆಗಳು ಬಿರುಕು ಬಿಟ್ಟಿದ್ದು,ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ಬೆಳಗಾವಿ ಜಿಲ್ಲೆಗಳು, ದಕ್ಷಿಣ ಒಳನಾಡಿನ. ಹಾಸನ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಗೋವಾ. ಮಹಾರಾಷ್ಟ್ರ ರಾಜಸ್ಥಾನ: ಹಿಮಾಚಲ ಪದೇಶ, ಉತರಾಖಂಡ. ಉತರ ಪದೇಶ. ಒಡಿಶಾ,ಆಂಧ್ರಪ್ರದೇಶ, ಗುಜರಾತ್‌, ತೆಲಂಗಾಣ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರಿ.ಮಳೆಯಾಗಲಿದೆ.