

ಕುಂದಾಪುರ: ಈ ವರ್ಷ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2022ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಇಂದ್ರ ಕುಮಾರ್ ಹೆಚ್.ಬಿ ಅವರ ” ಎತ್ತರ” ಕಾದಂಬರಿಗೆ ದೊರೆತಿದೆ. ಕಥೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಇವರು ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಲೇಖಕರುಗಳಾದ ಡಿ.ಎಸ್.ಚೌಗುಲೆ, ಶ್ರೀನಿವಾಸ ಮೂರ್ತಿ, ಅನುಪಮಾ ಪ್ರಸಾದ್ ಅವರು ನಿರ್ಣಾಯಕರಾಗಿ ಸಹಕರಿಸುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಇದೇ ಆಗಸ್ಟ್ ತಿಂಗಳಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.