

ಕುಂದಾಪುರ:”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ಆದರೆ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕು’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್’ ಹೆಬ್ಬಾಳ್ಕರ್ ಕರೆ ನೀಡಿದರು.
ಶನಿವಾರ ಕುಂದಾಪುರದ ಆರ್.ಎನ್, ಶೆಟ್ಟಿ ಭವನದಲ್ಲಿ ನಡೆದ ಕುಂದಾಪುರ ಬ್ಲಾರ್ ಕಾಂಗ್ರಸ್ ರಾರ್ಪಶರ್ತರ ಸಭಯಲ್ಲಿ ಮಾತನಾಡಿದ
ಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಕಾರ್ಯಕರ್ತರು ಜನರಿಗೆ ತಲುಪಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಲಾಗುವುದು. ಮುಂಬರುವ
ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು. ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು
ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು.
ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರವು ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳಿದೆ. ಕೇವಲ 4 ವರ್ಷಗಳಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ ರೂ. ಸಾಲದ ಹೊರೆಯನ್ನು ಹೊರಿಸಿದೆ ಎಂದು ಸಚಿವರು ಕಿಡಿಕಾಡಿದರು. ದೇಶದಲ್ಲಿ ಕೋಮು ಭಾವನೆಗಳನ್ನು ಕೆರಳಿಸಿದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಅಂಥ ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ ಇವರಿಗೆ ಹೆದರೋ ಮಾತೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಯುದ್ಧದಂತೆ ಹೋರಾಡಿ ಗೆಲುವಿಗೆ ಶ್ರಮಿಸಬೇಕೆಂದು ಸಚಿವರು ಹೇಳಿದರು.





