

ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜ.17ರಂದು ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ನ ಚಿನ್ನಾಭರಣ, ನಗದು ಹಣವನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 2 ಗೋಣಿಚೀಲ, ತಲ್ವಾರ್, 2 ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.