

ಕೋಲಾರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯರಿಗೆ 2022-23 ನೇ ಸಾಲಿನ ಯಶಸ್ವಿನಿ ಯೋಜನೆಯ ಪಲಾನುಭವಿಗಳಾಗಲು ಸಂಘದಿಂದ ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಘದ ಷೇರುದಾರ ಸದಸ್ಯರು ಕುಟುಂಬದ ನಾಲ್ಕ ಮಂದಿಗೆ ಶುಲ್ಕ 500 ರೂಗಳಾಗಿರುತ್ತದೆ. ಒಂದು ಕುಟುಂಬದಲ್ಲಿ 10 ಸದಸ್ಯರಿಗೆ ಮಾತ್ರ ಅವಕಾಶವಿದ್ದು, ತಲಾ ಎರಡು ಭಾವಚಿತ್ರ, ಆಧಾರ್‌ಕಾರ್ಡ್, ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, 4 ಸದಸ್ಯರಿಗಿಂತ ಹೆಚ್ಚುವರಿ ಸದಸ್ಯರು ಕುಟುಂಬದಲ್ಲಿ ನೊಂದಾಯಿಸಿಕೊಳ್ಳಲು ತಲಾ ಒಬ್ಬೊಬ್ಬರಿಗೆ 100 ರೂಗಳನ್ನು ಪಾವತಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಸದಸ್ಯರು ಜಾತಿ ಪ್ರಮಾಣಪತ್ರ ಸಲ್ಲಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಸದಸ್ಯರಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಡಿ, 31 ಕೊನೆಯ ದಿನವಾಗಿದ್ದು, ಸದಸ್ಯರು ಯಶಸ್ವಿನಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಕೋ.ನಾ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ಗಂಗಾಧರ್ ರವರನ್ನು 7353161040, 9110830279 ಸಂಪರ್ಕಿಸಬಹುದು.