ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಜನರು ಹಲ್ಲಿನ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಎಸ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಅಸ್ಪತ್ರೆಯಲ್ಲಿ ರಾಷ್ಟ್ರೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದಡಿ, ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಬೆಂಗಳೂರಿನ ವೈದೇಹಿ ಆಸ್ಪತ್ರೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ದಂತ ಜೋಡಣೆ ಮತ್ತು ದಂತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಹಲ್ಲು ಆಹಾರವನ್ನು ಅಗಿಯಲು ಮಾತ್ರವಲ್ಲದೆ ಮುಖಕ್ಕೆ ಅಂದವನ್ನೂ ಕೊಡುತ್ತದೆ ಎಂದು ಹೇಳಿದರು.
ಬೆಂಗಳೂರಿನ ವೈದೇಹಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಟಿ.ಮಯೂರರೆಡ್ಡಿ ಮಾತನಾಡಿ ರಾಷ್ಟ್ರೀಯ ಓರಲ್ ಹೆಲ್ತ್ ಪಾಲಿಸಿ ಹಾಗೂ ದಂತ ಆರೋಗ್ಯ ಕಾರ್ಯಕ್ರಮದಡಿ 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಉಚಿತವಾಗಿ ದಂತ ಜೋಡಣೆ ಮಾಡಲಾಗುವುದು. ಅರ್ಹ ಫಲಾನುಭವಿಗಳು ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯೆ ಡಾ. ಎನ್.ದೀಪಾ ರೆಡ್ಡಿ ಮಾತನಾಡಿ, ದಂತ ಜೋಡಣೆ ಅಗತ್ಯವಿರು 45 ಫಲಾನುಭಿವಗಳಿಗೆ ದಂತ ಜೋಡಣೆ ಮಾಡಲಾಗುವುದು. ಹಲ್ಲಿನ ಸಮಸ್ಯೆ ಇದ್ದಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ವೈದೇಹಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಮೋಹನ್ ಥಾಮಸ್, ಡಾ. ಡಿ.ಎನ್.ನಿರುಪಮಾ, ಡಾ. ಸನಿತಾ ರಾವ್, ಡಾ.ಅಶೋಕ್, ಡಾ.ಪವಿತ್ರ, ಡಾ. ಉಮಾಶಂಕರ್, ಲೀಡಿಯಾ, ಶಿವಕುಮಾರ್, ನಾಗರಾಜ್,ಕವಿತ ಇದ್ದರು.