JANANUDI.COM NETWORK
ಬೆಂಗಳೂರು,ಫೆ.18: ಜನವರಿ 26, ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ಮೇಲೆ ಕ್ರಮಕ್ಕೆ ಆಗ್ರಹಸಿ ವಿವಿಧ ಸಂಘಟನೆಗಳಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ಪ್ರಾಧಿಕಾರಕ್ಕೆ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.
.ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ವಿಧಾನಸೌಧ ಚಲೋ ಹಾಗೂ ಹೈಕೋರ್ಟ್ ಚಲೋ ಪ್ರತಿಭಟನೆಯು ನಾಳೆ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿದ್ದು, ಪ್ರತಿಭಟನೆಯ ಕಾವನ್ನು ತಗ್ಗಿಸಲು ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ದಲಿತ ಸಂಘಟನೆಗಳ ಕಾರ್ಯಕರ್ತರು ಮಾತನಾಡುತ್ತಿದ್ದಾರೆ. ಆದರೆ ಸಂಘಟನೆಗಳು ನ್ಯಾಯಾಧೀಶರ ವಜಾಕ್ಕೆ ಪಟ್ಟು ಹಿಡಿದಿರುವ ದಲಿತ ಸಂಘಟನೆಗಳ ಬೇಡಿಕೆಗೆ ಸರ್ಕಾರ ಹಾಗೂ ಹೈಕೋರ್ಟ್ ಮಣಿಯುವುದೇ ಎಂಬುದನ್ನು ಭವಿಶ್ಯಕ್ಕೆ ಬಿಟ್ಟ ವಿಚಾರ..
ಘಟನೆಯ ಸಂಬಂಧ ಜನಜಾಗೃತಿ ಮೂಡಿಸುವ ಸಲುವಾಗಿ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರ ನೇತೃತ್ವದಲ್ಲಿ ಮೈಸೂರಿನ ಅಶೋಕಪುರಂನಿಂದ ಬೆಂಗಳೂರಿನವರೆಗೆ ಹೊರಟಿರುವ ಕಾಲ್ನಡಿಗೆ ಜಾಥವು ನಾಳೆ ಬೆಂಗಳೂರಿನಲ್ಲಿ ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳುತ್ತಿದ್ದು, ನಾಳಿನ ಸಮಾವೇಶದಲ್ಲಿ ನ್ಯಾಯಾಧೀಶರ ವಜಾಕ್ಕೆ ಹಾಗೂ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮೀಸಲಾತಿಯನ್ನು ಪಾಲಿಸುವ ಕುರಿತು ಹಕ್ಕೋತ್ತಾಯವನ್ನು ಮಂಡಿಸಲಾಗುವುದು ಎಂದು ಆಯೋಜಕರು ಹೇಳುತ್ತಾರೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ನಾಯಕರನ್ನು ಜವಾಬ್ದಾರಯುತ ಸ್ಥಾನದಲ್ಲಿದ್ದವರು ರಾಷ್ಟ್ರಧ್ವಜವನ್ನು ಅವಮಾನಿಸುತ್ತಿರುವ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಯಾವುದೇ ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಸಮಾಜಾಯಿಸುವದನ್ನೆ ಅನೀತಿ ಬುದ್ದಿಯನ್ನು ತಮದನ್ನಾಗಿ ಮಾಡಿಕೊಂಡಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಆಡಳಿತ ವ್ಯವಸ್ಥೆ ವಿಫಲವಾಗಿರುವುದು ದೇಶವನ್ನು ಆತಂಕಕ್ಕೀಡು ಮಾಡಿದೆ.