

ರಾಯಚೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಯಚೂರು ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಮೃತ ದುರ್ದೈವಿಗಳು.
ಪುತ್ರ ಲಕ್ಕಪ್ಪ (5)ಗೆ ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಮಾರುತಿ ತಂದೆ ಲಕ್ಷ್ಮಣ ಅವರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.