

ಉಡುಪಿ,ಮಾ.೩: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯ ಕಾರ್ಯಕರ್ತರು ಹಾಜರಿದ್ದರು ಉಪಸ್ಥಿತಿಯಲ್ಲಿದ್ದರು.