

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ವೈದ್ಯರೊರ್ವರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತೀರುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ, ಕೂಡಲೇ ಡಾ. ಶಶಿಕಲಾ ಅವರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು ಎನ್ನಲಾಗಿದೆ.