

ಉಡುಪಿ,ಜು.15 : ಉಡುಪಿಯ ಅಂಬಲಪಾಡಿಯ ಗಾಂಧಿನಗರ ಇಲ್ಲಿಯ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ
ಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು 3ಳದು ಬಂದಿದೆ.
ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಅ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (50) ಮೃತರು. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಅಸ್ಪತ್ರೆಯಲ್ಲಿ ಸದ್ಯ ಚಿಕಿತ್ಸ ನಿಂಡಲಾಗುತ್ತಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಅಭ್ಯವಾಗಿದೆ.
ಇವರ ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಅಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ 3ಳಸಿದ್ದಾರೆ.
ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.
ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲ ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು.ಪ್ರಜ್ಞಾಹೀನ ಸ್ಥಿಯಲ್ಲಿದ್ದರು ಎಂದು ತಿಳಿದುಬಂದಿದೆ.
ಮೂರು ಅಂತಸ್ತಿನ ಮನೆಯೊಳಗಿನ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಬೆಳಗಿನ ಜಾವ 5.40ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆಗೆ ಮನೆಯ ನೆಲಮಹಡಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.




