JANANUDI.COM NETWORK
ಉಡುಪಿ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆ ಇಟ್ಟಿದ್ದ ಶಾಲೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಆದಿ ಉಡುಪಿ ದಿ.ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದಿದೆ.ರಾಜೇಶ್ ಕುಂದರ್ ಪೊಲೀಸ್ ಕರ್ತವ್ಯಕ್ಕೆ ಸಂಬಂಧಪಟ್ಟಂತ ಕೆಲದಿನಗಳ ಹಿಂದೆ ರಾಜೇಶ್ ಕುಂದರ್ ಅಮಾನತು ಆಗಿದ್ದರು. 2 ದಿನಗಳ ಹಿಂದೆ ಮತ್ತೆ ರಾಜೇಶ್ ಕುಂದರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಶಾಲಾ ಬಂದೋಬಸ್ತಗೆ ನಿಯೋಜನೆ ಮಾಡಲಾಗಿತ್ತು ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಮೃತ ದುರ್ದೈವಿ. ಇವರು ತಮ್ಮ ರೈಫಲ್‍ನಿಂದ ಕುತ್ತಿಗೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಳಿತುಕೊಂಡ ಸ್ಥಿತಿಯಲ್ಲಿ ಮೃತದೇಹ ಇದೆ.
ಉಡುಪಿ ಜಿಲ್ಲೆಯ ಆದಿ ಉಡುಪಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಮ್‍ನಲ್ಲಿ ಇಡಲಾಗಿದೆ. ಹೀಗಾಗಿ ಶಾಲೆಯ ಬಂದೋಬಸ್ತಗಾಗಿ ಮೂರು ಜನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಇಂದು ಬೆಳಗಿನ ಜಾವ ಇಬ್ಬರು ಸಿಬ್ಬಂದಿ ಸ್ಥಳದಲ್ಲಿ ಇಲ್ಲದ ಸಂದರ್ಭದಲ್ಲಿ ತನ್ನ ರೈಫಲ್‍ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಉಡುಪಿ ನಗರ ಠಾಣಾ ಮತ್ತು ಮಲ್ಪೆ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಣಿಪಾಲ ಕೆಎಂಸಿ ಮತ್ತು ಮಂಗಳೂರಿನ ಆರ್‌ಎಫ್‍ಎಸ್‍ಎಲ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆಯನ್ನು ನಡೆಸಿದ್ದಾರೆ.