

ಕಾಪು,ಎ.26 : ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹಿರಿಯ ದಂಪತಿ ಮತದಾನಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯಂತ ಹಿರಿಯ ದಂಪತಿ ಪಾಸ್ಕಲ್ ಡಿಸೋಜಾ (98 ವರ್ಷ) ಮತ್ತು ಕ್ರಿಸ್ತಿನ್ ಡಿಸೋಜಾ (93 ವರ್ಷ) ತನ್ನ ಪುತ್ರ ಮತ್ತು ಸೊಸೆಯೊಂದಿಗೆ ಮೇಲ್ಪೇಟೆ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತವನ್ನು ಚಲಾಯಿಸಿದರು.

