

ಬೆಳ್ಮಣ್ಣು ಜೇಸಿಐ ನೇತೃತ್ವದಲ್ಲಿ ಮಾರ್ಚ್ 10ರಂದು ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟ
ಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗದ ನೇತೃತ್ವದಲ್ಲಿ 44ನೇ ವರ್ಷಾಚರಣೆ ಅಂಗವಾಗಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 10ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 08-30ರಿಂದ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಶಾಲಾ ಮೈದಾನದಲ್ಲಿ ಮಹಿಳಾ – ಯುವತಿಯರ ವಿಭಾಗದ ಥ್ರೋಬಾಲ್ ಪಂದ್ಯಾಟ ಜರಗಲಿದೆ. ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ಸರಿತಾ ದಿನೇಶ್ ಸುವರ್ಣ ಅವರು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.