

ಕುಂದಾಪುರ : ಮಾರ್ಚ್ 17ಮತ್ತು 18ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬ್ಬಡ್ಡಿ (ಉಡುಪಿ ವಲಯ) ಪಂದ್ಯಾವಳಿ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 17 ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತಾರಾಮ್ ಪ್ರಭು ವಹಿಸಲಿದ್ದಾರೆ.
ಉದ್ಯಮಿ ಚಂದ್ರಶೇಖರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಗೌರವ ಉಪಸ್ಥಿತರಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ ಡಿಸೋಜಾ, ಬೆಂಗಳೂರಿನ ಲೆಕ್ಕಪರಿಶೋಧಕ ರಾಘವೇಂದ್ರ ಶೆಟ್ಟಿ ಕಟ್ಕೆರೆ ಮತ್ತು ಹರೀಶ್ ಕುಮಾರ್ ಶೆಟ್ಟಿ, ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರ ಪಿ.ಎ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಾರ್ಚ್ 18ರಂದು ಸಂಜೆ 4.30ಗಂಟೆಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ. ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತಾರಾಮ್ ಪ್ರಭು ಬಹುಮಾನ ವಿತರಣೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾನಿಲಯದ ಕಬಡ್ಡಿ ತಂಡದ ಮಾಜಿ ನಾಯಕ, ರಾಜೇಂದ್ರ ಸುವರ್ಣ, ಗುರು ಹನುಮಾನ್ ಕೆಟರರ್ಸ ಇದರ ಮಾಲಿಕ ಹಳ್ತೂರಿನ ಭರತ್ ಕುಮಾರ್ ಶೆಟ್ಟಿ, ಹಾಸನದ ಶ್ರೀರಾಮ ಟೈಲ್ಸ್ ಮತ್ತು ಸ್ಯಾನಿಟರಿ ಇದರ ಮಾಲಿಕ ಪ್ರತೀಶ್ ಶೆಟ್ಟಿ ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

