ಕುಂದಾಪುರ, ಜ.5: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜನವರಿ 4 ರಂದು ತಾಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು. ವಿದ್ಯಾರ್ಥಿಗಳ ಪೋಷಕರು ಲಸಿಕ ಕೇಂದ್ರದಲ್ಲಿ ಉಪಸ್ಥಿತರಿದ್ದರು. ಕುಂದಾಪುರ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐ ವಿ ಯವರು, ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸಂಗೀತ ರವರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.