ಕುಂದಾಪುರ, ಜು.26: ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.
ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ಎಂ. ನಾಯಕ್ ವಲಯ ಅರಣ್ಯಾಧಿಕಾರಿಗಳು ಕುಂದಾಪುರ ಇವರು ವನಮಹೋತ್ಸವ ಆಚರಣೆಯ ಮಹತ್ವ, ಮರಗಿಡಗಳ ಉಪಯೋಗ, ಪರಿಸರ ಸಂರಕ್ಷಣೆ ಕುರಿತಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಪ್ರತಿಕೂಲ ಪರಿಣಾಮಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಮರಗಿಡಗಳ ಪ್ರಾಮುಖ್ಯತೆ ಕುರಿತಾದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಅನಾವರಣಗೊಂಡವು, ವಿವಿಧ ಔಷಧಿಯ ಗಿಡಗಳ ಕುರಿತಾದ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮೊದಲ ರೂಪಣಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 2ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಎ.ಸಿ.ರವರು ವಹಿಸಿ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಉಪನಾಯಕ ಅಮಿತ್ ರೋಶನ್ ಡಿ’ಸೋಜಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ವಿಲ್ಶಾ ಮರಿಯಾ ಡಿ’ಅಲ್ಮೇಡಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿನಿ ಕುಮಾರಿ ನಿಹಾರಿಕಾ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಪಾಯಲ್ರವರು ವಂದಿಸಿದರು. ಶಿಕ್ಷಕಿಯರಾದ ಅಂಕಿತಾ ಹಾಗು ಸೆಲಿನ್ ಡಿ’ಸೋಜಾರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.