JANANUDI.COM NETWORK

ಬೆಂಗಳೂರು,ಜು. 26: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿಯನ ಶಾರದೆ ಅನ್ನೋ ಬಿರುದು ಗಳಿಸಿದ್ದ ಜಯಂತಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿದ್ದ ಜಯಂತಿ ಅವರು,ಹಲವು ಭಾಶೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸುವ ಮೂಲಕ ಬಹು ಜನ ಪ್ರಿಯ ಜೋಡಿ ಎಂದು ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು.. ಅಭಿನಯ ಶಾರದೆ ಎಂದೇ ಖ್ಯಾತರಾಗಿದ್ದ ಜಯಂತಿ ಕನ್ನಡ ಮಾತ್ರವಲ್ಲದೇ ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

