ಕಾರ್ಕಳ:ಅ 31. ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ ಶೇಖರ್ ಅಜೆಕಾರ್ ಹೃದಯಘಾತದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು. ಶೇಖರ್ ಅಜಿಕಾರ್ ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ. ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು.
ಶೇಖರ್ ಅಜೆಕಾರ್ ಅವರಿಗೆ ಕುಂದಾಪುರದ ಹತ್ತಿರದ ನಂಟು ಇತ್ತು. ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ವರದಿಗಾರರಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ್ “ಕರ್ನಾಟಕ ಮಲ್ಲ, ಜನವಾಹಿನಿ, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸ್ಲಿದ್ದಾರೆ. 10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಅಮಂತ್ರನ ಪ್ರಶಸ್ತಿ 2019, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ. ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಲಭಿಸಿದೆ.
ಅವರು ಆಯೋಜಿಸುತ್ತಿದ್ದ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಾಹಿತ್ಯಾಸಕ್ತರ ಮೆಚ್ಚುಗೆ ಗಳಿಸಿತ್ತು. ಎಲೆಮರೆಯಲ್ಲಿದ್ದ ಆಪಾರ ಸಾಹಿತಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಶೇಖರ್ ಅವರ ಶ್ರಮ ಅನನ್ಯವಾದದ್ದು. ಅವರ ನಿಧನ ಸಾಹಿತ್ಯ ಮತ್ತು ಮಾದ್ಯಮ ಲೋಕಕ್ಕೆ ಅಪಾರ ನಶ್ಟವಾಗಿದೆ.