ಬಾಗಲಕೋಟೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋಷಿಸಿರುವ ಬರಪರಿಹಾರ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು
ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ಮೇಲೆ ಈಗ ಕೇಂದ್ರ ಸರ್ಕಾರ 3,464 ಕೋಟಿ ರೂ. ಬರ ಪರಿಹಾರ ನೀಡುತ್ತಿದೆ. ಇದು ಬಹಳ ಕಡಿಮೆ ಪ್ರಮಾಣದ ಪರಿಹಾರ. ನಾವು ಕೇಳಿದ್ದು 18,172ಕೋಟಿ ರೂಪಾಯಿ. ಕೇಂದ್ರ ನೀಡುತ್ತಿರುವುದು ಕೇವಲ 3,464 ಕೋಟಿ ರೂ. ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಈ ಪರಿಹಾರ ರಾಜ್ಯಕ್ಕೆ ಸಾಲುವುದಿಲ್ಲ ಹಾಗಾಗಿ ಬರ ಪರಿಹಾರ ಹೆಚ್ಚಿಸುವಂತೆ ನಾಳೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ. ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕೇಂದ್ರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ
ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.