

ಶ್ರೀನಿವಾಸಪುರ : ಪ್ರಾಚೀನ ಬಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿಬಾಗಗಳಲ್ಲಿ ಉಳಿಸಿಕೊಳ್ಳಲು ನಾವೆಲ್ಲರೂ ಪಣ ತೊಡಬೇಕು. ಕನ್ನಡ ಬಾಷೆಯನ್ನು ಉಳಿಸಿ ಬೆಳೆಸುವ ಆದ್ಯ ಕರ್ತವ್ಯ ನಮ್ಮ ನಿಮ್ಮೆಲ್ಲರ ಮೇಲೆ ಇದೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದರು.
ಗಡಿಬಾಗವಾದ ನಮ್ಮ ತಾಲ್ಲೂಕನ್ನು ಕನ್ನಡಬಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ನಮ್ಮ ನಾಡು-ನುಡಿ ಜಲವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರೂ ಕನ್ನಡದ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕು, ಪ್ರತಿ ಕನ್ನಡಿಗನ ಕರುನಾಡಿನ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ ವಾಗಿದ್ದು ಕರ್ನಾಟಕ ಮೊದಲು ಮೈಸೂರು ಪ್ರಾಂತ್ಯವಾಗಿತ್ತು, ಎಂದ ಇವರು ನಮ್ಮ ರಾಜ್ಯದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.
ನಾಡಿನ ಸಮಸ್ತ ಜನತೆ ರಾಜ್ಯೋತ್ಸವದ ಶುಭಾಷಯಗಳನ್ನು ಕೋರಿದರು.
ಜಿ.ಪಂ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಸದಸ್ಯ ಇಂದಿರಾಭವನ್ ರಾಜಣ್ಣ, ಜೆಡಿಎಸ್ ಪಕ್ಷದ ರಾಜ್ಯ ಪ್ರದಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜೆಡಿಎಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಮುತ್ತಪ್ಪ, ನವ ಕರ್ನಾಟಕ ವೇದಿಕೆ ರಾಜ್ಯ ಕಾರ್ಯದರ್ಶಿ ಸಾದಿಕ್ ಅಹಮ್ಮದ್, ಜೆ.ತಿಮ್ಮಸಂದ್ರ ಗ್ರಾ.ಪಂ ಅಧ್ಯಕ್ಷ ಕೆ.ಎನ್.ಶಂಕರರೆಡ್ಡಿ, ಮುಖಂಡರಾದ ಅಂಬೇಡ್ಕರ್ ಪಾಳ್ಯ ರವಿ, ಶ್ರೀನಾಥಬಾಬು ಇದ್ದರು.
